ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿಯನ್ನು ಎಪ್ರಿಲ್ 23ರ ತನಕ ವಿಸ್ತರಿಸಿದ ದಿಲ್ಲಿ ಕೋರ್ಟ್
ಅರವಿಂದ್ ಕೇಜ್ರಿವಾಲ್ | PC : PTI
ಹೊಸದಿಲ್ಲಿ: ದಿಲ್ಲಿಯ ರೌಸ್ ಅವೆನ್ಯೂ ನ್ಯಾಯಾಲಯವು ದಿಲ್ಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಎಪ್ರಿಲ್ 23ರ ತನಕ ಇಂದು ವಿಸ್ತರಿಸಿದೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಬಂಧಿಸಲಾಗಿತ್ತು.
ಕೇಜ್ರಿವಾಲ್ ಅವರನ್ನು ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ವರ್ಚುವಲ್ ಆಗಿ ಹಾಜರುಪಡಿಸಲಾಯಿತು.
ಇನ್ನೊಂದೆಡೆ ತಮ್ಮ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಇಡಿಗೆ ನೋಟಿಸ್ ಜಾರಿಗೊಳಿಸಿದೆ.
Next Story