ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್ ದಾಖಲು
ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕರಣ
Photo Credit: PTI
ಹೊಸದಿಲ್ಲಿ: ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕಾಗಿ ಟಿಎಂಸಿ ಲೋಕಸಭಾ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
X ನಲ್ಲಿ ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಕಾಲ್ತುಳಿತ ಸಂಭವಿಸಿದ ಸ್ಥಳಕ್ಕೆ ಶರ್ಮಾ ಆಗಮಿಸುತ್ತಿರುವ ವೀಡಿಯೊ ಪೋಸ್ಟ್ ಗೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಅದನ್ನು ಅವರು ಅಳಿಸಿ ಹಾಕಿದ್ದರು ಎಂದು ತಿಳಿದು ಬಂದಿದೆ.
Next Story