ಸರಕಾರಿ ವಾಹನ ರಾಜಕೀಯ ಉದ್ದೇಶಕ್ಕೆ ಬಳಸಿದ ಆರೋಪ: ದಿಲ್ಲಿ ಸಿಎಂ ಆತಿಶಿ ವಿರುದ್ಧ ಪ್ರಕರಣ ದಾಖಲು
ದಿಲ್ಲಿ ಮುಖ್ಯಮಂತ್ರಿ ಆತಿಶಿ (Photo: PTI)
ಹೊಸದಿಲ್ಲಿ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸರಕಾರಿ ವಾಹನವನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಂಡ ಆರೋಪದ ಮೇಲೆ ಎಎಪಿ ನಾಯಕಿ ಹಾಗೂ ದಿಲ್ಲಿ ಮುಖ್ಯಮಂತ್ರಿ ಆತಿಶಿ ವಿರುದ್ಧ ದಿಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ರಾಜಕೀಯ ಉದ್ದೇಶಕ್ಕಾಗಿ ಸರ್ಕಾರಿ ವಾಹನವನ್ನು ಬಳಸಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಜನವರಿ 8ರಂದು ಆತಿಶಿ ವಿರುದ್ಧ ದೂರು ದಾಖಲಾಗಿತ್ತು.
ʼDL-IL-AL1469ʼ ನೋಂದಣಿ ಸಂಖ್ಯೆ ಹೊಂದಿರುವ ಸರ್ಕಾರಿ ಕಾರನ್ನು ಚುನಾವಣಾ ಸಂಬಂಧಿತ ಚಟುವಟಿಕೆಗಳಿಗೆ ಬಳಸಲಾಗಿದೆ. ಪ್ರಚಾರ ಅಥವಾ ಚುನಾವಣಾ ಸಂಬಂಧಿತ ಪ್ರಯಾಣಕ್ಕಾಗಿ ಸರಕಾರಿ ವಾಹನವನ್ನು ಬಳಸದಂತೆ ನಿಷೇಧ ಮಾಡಿರುವ ಸಾಮಾನ್ಯ ಆಡಳಿತ ಇಲಾಖೆಯ ನಿರ್ದೇಶನವನ್ನು ಉಲ್ಲಂಘಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Next Story