ಅಗ್ನಿ ದುರಂತ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ಕುವೈತ್ಗೆ ತೆರಳಲು ಅನುಮತಿ ನಿರಾಕರಿಸಿದ ಕೇಂದ್ರ ಸರಕಾರ: ಕೇರಳ ಸಚಿವೆ ವೀಣಾ ಜಾರ್ಜ್ ಆರೋಪ
ಕೇರಳ ಸಚಿವೆ ವೀಣಾ ಜಾರ್ಜ್ (Photo: Facebook)
ತಿರುವನಂತಪುರಂ: ಕುವೈತ್ನಲ್ಲಿ ಸಂಭವಿಸಿರುವ ಭೀಕರ ಅಗ್ನಿ ದುರಂತದ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸರಕಾರ ತನಗೆ ಅನುಮತಿ ನಿರಾಕರಿಸಿದೆ ಎಂದು ಗುರುವಾರ ಕೇರಳ ಸಚಿವೆ ವೀಣಾ ಜಾರ್ಜ್ ಆರೋಪಿಸಿದ್ದಾರೆ.
ಕೊಲ್ಲಿ ರಾಷ್ಟ್ರವಾದ ಕುವೈತ್ನಲ್ಲಿ ಸಂಭವಿಸಿರುವ ಭೀಕರ ಅಗ್ನಿ ದುರಂತದ ಪರಿಹಾರ ಕಾರ್ಯಾಚರಣೆಯಲ್ಲಿ ಸಮನ್ವಯ ಸಾಧಿಸಲು ಕುವೈತ್ಗೆ ಭೇಟಿ ನೀಡಲು ಬಯಸಿದ್ದ ನನಗೆ ಅನುಮತಿ ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
"ನಾವು ಕುವೈತ್ಗೆ ಭೇಟಿ ನೀಡಿ, ಈ ದುರಂತದಲ್ಲಿ ಸಂತ್ರಸ್ತರಾಗಿರುವ ನಮ್ಮ ಜನರ ನೆರವಿಗೆ ನಿಂತು, ಪರಿಹಾರ ಕಾರ್ಯಾಚರಣೆಯಲ್ಲಿ ಸಮನ್ವಯ ಸಾಧಿಸಲಷ್ಟೆ ನಾವು ಕೇಂದ್ರ ಸರಕಾರದ ಅನುಮತಿ ಕೋರಿದ್ದೆವು. ಆದರೆ, ಈ ಅನುಮತಿಯನ್ನು ನಿರಾಕರಿಸಲಾಗಿದೆ" ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬುಧವಾರ ಕುವೈತ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ್ಟಿದ್ದು, ಈ ಪೈಕಿ 45 ಮಂದಿ ಭಾರತೀಯರಾಗಿದ್ದಾರೆ.
Next Story