ಮಹಾರಾಷ್ಟ್ರದಲ್ಲಿ ಬಿಜೆಪಿಯ ಕಳಪೆ ನಿರ್ವಹಣೆ: ಉಪಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲು ಮುಂದಾದ ದೇವೇಂದ್ರ ಫಡ್ನವೀಸ್
ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯ ಕಳಪೆ ನಿರ್ವಹಣೆಗೆ ನೈತಿಕ ಹೊಣೆ ಹೊತ್ತು ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ತಮ್ಮನ್ನು ಈ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕೆಂದು ಅವರು ಪಕ್ಷದ ನಾಯಕತ್ವವನ್ನು ಕೋರಿದ್ದಾರೆ.
ಮಹಾರಾಷ್ಟ್ರದಲ್ಲಿ ಕಳೆದ ಚುನಾವಣೆಯಲ್ಲಿ 23 ಸ್ಥಾನ ಗಳಿಸಿದ್ದ ಬಿಜೆಪಿ ಈ ಬಾರಿ ಕೇವಲ 9 ಸ್ಥಾನಗಳನ್ನು ಪಡೆದಿದೆ.
ಪಕ್ಷದ ನಿರಾಶಾದಾಯಕ ನಿರ್ವಹಣೆಗೆ ಅವರು ಸಂಪೂರ್ಣ ಹೊಣೆ ಹೊತ್ತುಕೊಂಡಿದ್ದಾರೆ.
“ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ನಿರ್ವಹಣೆ ಸುಧಾರಿಸಲು ಸಂಘಟನಾತ್ಮಕ ಮಟ್ಟದಲ್ಲಿ ಕೆಲಸ ಮಾಡಿ ಪಕ್ಷವನ್ನು ಬಲಪಡಿಸಲು ಶ್ರಮಿಸಲು ನಾನು ಬಯಸುತ್ತೇನೆ. ರಾಜ್ಯ ಸರ್ಕಾರದಲ್ಲಿ ನನಗೆ ನೀಡಿರುವ ಜವಾಬ್ದಾರಿಯಿಂದ ನನ್ನನ್ನು ಮುಕ್ತಗೊಳಿಸಬೇಕೆಂದು ಕೇಂದ್ರ ನಾಯಕತ್ವವನ್ನು ಕೋರಿದ್ದೇನೆ,” ಎಂದು ಫಡ್ನವೀಸ್ ಹೇಳಿದ್ದಾರೆ.
Next Story