"ವಿಪಕ್ಷದ ಆಡಳಿತವಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ನಲ್ಲಿ ತಾರತಮ್ಯ": ಸಂಸತ್ ಎದುರು ವಿಪಕ್ಷ ನಾಯಕರ ಪ್ರತಿಭಟನೆ
PC : ANI
ಹೊಸದಿಲ್ಲಿ: ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ನಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ವಿಪಕ್ಷಗಳು ಬುಧವಾರ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಇಂಡಿಯಾ ಮೈತ್ರಿಕೂಟದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಹಿತ ಸಂಸತ್ತಿನ ಎದುರು ಪ್ರತಿಭಟನೆ ನಡೆಸಿದರು.
"ಎನ್ಡಿಎಯಿಂದ ಬಜೆಟ್ನಲ್ಲಿ ಭಾರತಕ್ಕೆ ದ್ರೋಹ", "ನಮಗೆ ಭಾರತ ಬಜೆಟ್ ಬೇಕು, ಎನ್ಡಿಎ ಬಜೆಟ್ ಅಲ್ಲ" ಎಂಬ ಫಲಕಗಳನ್ನು ವಿಪಕ್ಷದ ನಾಯಕರು ಕೇಂದ್ರ ಬಜೆಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನವದೆಹಲಿ: ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಜೆಟ್ನಲ್ಲಿ ತಾರತಮ್ಯ ಮಾಡಿದೆ ಎಂದು ಇಂಡಿಯಾ ಬಣದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರು ಸಂಸತ್ತಿನ ಎದುರು ಬುಧವಾರ ಧರಣಿ ನಡೆಸಿದರು.
"ಇದೊಂದು ವಂಚನೆಯ ಬಜೆಟ್, ಜನರಿಗೆ ಅನ್ಯಾಯವಾಗಿದೆ" ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಕೂಡಾ ಬಜೆಟ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, "ಬಜೆಟ್ನಲ್ಲಿ ಯುವಕರಿಗೆ ಸುಳ್ಳು ಭರವಸೆಗಳನ್ನು ನೀಡಲಾಗಿದೆ" ಎಂದು ಹೇಳಿದ್ದಾರೆ.