ಸರಕಾರ ರಚನೆಯ ಕುರಿತು ಚರ್ಚೆ: ಇಂದು ಸಂಜೆ ಖರ್ಗೆ ನಿವಾಸದಲ್ಲಿ ಸಭೆ ಸೇರಲಿರುವ ಇಂಡಿಯಾ ನಾಯಕರು
PC : PTI
ಹೊಸದಿಲ್ಲಿ: ಕೇಂದ್ರದಲ್ಲಿ ಹೊಸ ಸರಕಾರ ರಚನೆ ಸಾಧ್ಯತೆ ಕುರಿತು ಚರ್ಚಿಸಲು ಬುಧವಾರ ಸಂಜೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ನಾಯಕರು ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಮಾಜಿ ಮಿತ್ರ ಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯುನ ಮುಖ್ಯಸ್ಥರಾದ ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಅವರೊಂದಿಗೆ ಮಾತುಕತೆ ನಡೆಸುವ ಕಾರ್ಯತಂತ್ರದ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, “ಇಂಡಿಯಾ ಜನಬಂಧನ್ ನಾಯಕರು ಇಂದು ಸಂಜೆ 6 ಗಂಟೆಗೆ 10, ರಾಜಾಜಿ ಮಾರ್ಗ್ ನಲ್ಲಿ ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾ ಫಲಿತಾಂಶ ಹಾಗೂ ನಂತರದ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲಾಗುವುದು” ಎಂದು ಬರೆದುಕೊಂಡಿದ್ದಾರೆ.
ಕೇಂದ್ರದಲ್ಲಿ ಸರಕಾರ ರಚಿಸಲು ಮಾಜಿ ಮಿತ್ರ ಪಕ್ಷಗಳಾದ ಜೆಡಿಯು ಹಾಗೂ ತೆಲುಗು ದೇಶಂ ಪಕ್ಷಗಳನ್ನು ಇಂಡಿಯಾ ಮೈತ್ರಿಕೂಟಕ್ಕೆ ಸೆಳೆಯಲು ವಿರೋಧ ಪಕ್ಷಗಳ ನಾಯಕರು ಕಸರತ್ತು ಆರಂಭಿಸಿದ್ದಾರೆ.
The INDIA Janbandhan leaders will be meeting today at 6 PM at 10, Rajaji Marg to discuss the election results and strategy thereafter.
— Mallikarjun Kharge (@kharge) June 5, 2024