ಪ್ರಧಾನಿಯವರ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಬಿಬೇಕ್ ಡೆಬ್ರಾಯ್ ನಿಧನ
ಬಿಬೇಕ್ ಡೆಬ್ರಾಯ್ (Photo: PTI)
ಹೊಸದಿಲ್ಲಿ: ಪ್ರಧಾನಿ ಮೋದಿಯವರ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ, ಅರ್ಥಶಾಸ್ತ್ರಜ್ಞ ಬಿಬೇಕ್ ಡೆಬ್ರಾಯ್ ಅವರು ಶುಕ್ರವಾರ ನಿಧಾನರಾದರು.
ಅವರಿಗೆ 69 ನೇ ವಯಸ್ಸಾಗಿತ್ತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡೆಬ್ರಾಯ್, ಈ ಹಿಂದೆ ಪುಣೆಯ ಗೋಖಲೆ ಇನ್ಸ್ಟಿಟ್ಯೂಟ್ ಆಫ್ ಪಾಲಿಟಿಕ್ಸ್ ಅಂಡ್ ಎಕನಾಮಿಕ್ಸ್ (ಜಿಐಪಿಇ) ಕುಲಪತಿಯಾಗಿ ಸೇವೆ ಸಲ್ಲಿಸಿದ್ದರು.
ಡೆಬ್ರಾಯ್ ಅವರ ನಿಧನಕ್ಕೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅವರೊಬ್ಬ ಉನ್ನತ ವಿದ್ವಾಂಸರಾಗಿದ್ದರು ಎಂದು ಪ್ರಧಾನಿ ಬಣ್ಣಿಸಿದ್ದಾರೆ.
"ಡಾ. ಬಿಬೇಕ್ ಡೆಬ್ರಾಯ್ ಜಿ ಅವರು ಒಬ್ಬ ಉನ್ನತ ವಿದ್ವಾಂಸರಾಗಿದ್ದರು, ಅರ್ಥಶಾಸ್ತ್ರ, ಇತಿಹಾಸ, ಸಂಸ್ಕೃತಿ, ರಾಜಕೀಯ, ಆಧ್ಯಾತ್ಮಿಕತೆ ಸೇರಿದಂತೆ ವೈವಿಧ್ಯಮಯ ಕ್ಷೇತ್ರಗಳಲ್ಲಿ ಚೆನ್ನಾಗಿ ಪಾರಂಗತರಾಗಿದ್ದರು. ತಮ್ಮ ಕೃತಿಗಳ ಮೂಲಕ ಅವರು ಭಾರತದ ಬೌದ್ಧಿಕ ಭೂದೃಶ್ಯದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ" ಎಂದು ಪ್ರಧಾನಿ ಮೋದಿಯವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Next Story