ಜಮ್ಮು- ಕಾಶ್ಮೀರ, ಹರ್ಯಾಣ ಮತ ಎಣಿಕೆ: ದಿಲ್ಲಿಯ ಕಾಂಗ್ರೆಸ್ ಕಚೇರಿ ಮುಂದೆ ಸಂಭ್ರಮಾಚರಣೆ
Photo: NDTV
ಹೊಸದಿಲ್ಲಿ: ಜಮ್ಮು - ಕಾಶ್ಮೀರ ಮತ್ತು ಹರ್ಯಾಣ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ದಿಲ್ಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಸಂಭ್ರಮಾಚರಣೆ ಆರಂಭವಾಗಿದೆ.
ಹರ್ಯಾಣದಲ್ಲಿ ಭೂಪಿಂದರ್ ಹೂಡಾ ನೇತೃತ್ವದ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿದೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಡಿಯಾ ಮೈತ್ರಿಕೂಟದ ಪರ ಫಲಿತಾಂಶ ಬರಲಿರುವ ಬಗ್ಗೆ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದೆ. ಇದರಿಂದಾಗಿ ದಿಲ್ಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಕಾಂಗ್ರೆಸ್ ಕಾರ್ಯಕರ್ತರು ಧ್ವಜಗಳನ್ನು ಹಿಡಿದು, ಡೋಲ್ ಗಳನ್ನು ಬಡಿದು ಸಂಭ್ರಮಾಚರಣೆ ಮಾಡುತ್ತಿದ್ದಾರೆ
Next Story