ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪನ; ಉತ್ತರ ಭಾರತದ ಹಲವೆಡೆ ಕಂಪನದ ಅನುಭವ

PC : X
ಹೊಸದಿಲ್ಲಿ: ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಉತ್ತರ ಭಾರತದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.
ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪನವು ಸ್ಥಳೀಯ ಕಾಲಮಾನ ರಾತ್ರಿ 7.52ಕ್ಕೆ ಸಂಭವಿಸಿದೆ. ಭೂಕಂಪನದ ಕೇಂದ್ರಬಿಂದು ಪಶ್ಚಿಮ ನೇಪಾಳದಲ್ಲಿ 20 ಕಿಮೀ ಆಳದಲ್ಲಿದೆ ಎಂದು ಹೇಳಲಾಗಿದೆ. ಸಾವು-ನೋವುಗಳ ಬಗ್ಗೆ ತಕ್ಷಣಕ್ಕೆ ಮಾಹಿತಿ ಲಭ್ಯವಾಗಿಲ್ಲ.
ಮಾರ್ಚ್ 28ರಂದು ಮ್ಯಾನ್ಮಾರ್ನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. 3,000ಕ್ಕೂ ಅಧಿಕ ಜನರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ನೇಪಾಳದಲ್ಲಿ ಭೂಕಂಪನ ಸಂಭವಿಸಿದೆ.
Next Story