ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ BRS ಮುಖ್ಯಸ್ಥ ಕೆಸಿಆರ್ ಗೆ ನಿರ್ಬಂಧ!
ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಮತ್ತು ಭಾರತ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ಅವರಿಗೆ ಮುಂದಿನ 48 ಗಂಟೆಗಳ ಕಾಲ ಚುನಾವಣಾ ಪ್ರಚಾರಗಳಲ್ಲಿ ಭಾಗವಹಿಸದಂತೆ ಭಾರತೀಯ ಚುನಾವಣಾ ಆಯೋಗವು ನಿರ್ಬಂಧ ಹೇರಿದೆ.
ಕಾಂಗ್ರೆಸ್ ಬಗ್ಗೆ ಕೆ ಚಂದ್ರಶೇಖರ ರಾವ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಅವರ ಹೇಳಿಕೆಗಳು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಅವರಿಗೆ ಬರೆದ ಪತ್ರದಲ್ಲಿ ಚುನಾವಣಾ ಆಯೋಗವು ತಿಳಿಸಿದೆ.
ಎ.5 ರಂದು ಕೆಸಿಆರ್ ಅವರು ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿರಿಯ ಉಪಾಧ್ಯಕ್ಷ ಜಿ. ನಿರಂಜನ್ ಅವರು ದೂರು ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.
Next Story