ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಮುಖಂಡ ಹರಕ್ ಸಿಂಗ್ ರಾವತ್ ನಿವಾಸದ ಮೇಲೆ ಈಡಿ ದಾಳಿ
Photo: PTI
ಡೆಹ್ರಾಡೂನ್: ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಈಡಿ)ವು ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಹರಕ್ ಸಿಂಗ್ ರಾವತ್ ನಿವಾಸದ ಮೇಲೆ ಬುಧವಾರ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಉತ್ತರಾಖಂಡ, ದಿಲ್ಲಿ ಮತ್ತು ಚಂಡೀಗಢದ ಹಲವು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ತಿಳಿದುಬಂದಿದೆ.
2022ರ ಉತ್ತರಾಖಂಡ ವಿಧಾನಸಭಾ ಚುನಾವಣೆಗೂ ಮುನ್ನ ರಾವತ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.
ಜಾರಿ ನಿರ್ದೇಶನಾಲಯದ ತನಿಖೆಯು ರಾಜ್ಯದ ಕಾರ್ಬೆಟ್ ಹುಲಿ ಸಂರಕ್ಷಿತ ಪ್ರದೇಶದಲ್ಲಿನ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದೆ ಎಂದು ತಿಳಿದು ಬಂದಿದೆ.
Next Story