ಈಡಿ ಸಮನ್ಸ್ ಪ್ರಕರಣ: ಅರವಿಂದ್ ಕೇಜ್ರಿವಾಲ್ಗೆ ಜಾಮೀನು ಮಂಜೂರು
ಅರವಿಂದ್ ಕೇಜ್ರಿವಾಲ್ (PTI)
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸಮನ್ಸ್ ಗಳನ್ನು ತಪ್ಪಿಸಿದ್ದಕ್ಕಾಗಿ ಜಾರಿ ನಿರ್ದೇಶನಾಲಯ (ಈಡಿ) ನೀಡಿದ ಎರಡು ದೂರುಗಳ ಆಧಾರದ ಮೇಲೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ನ್ಯಾಯಾಲಯವು 15,000 ರೂಪಾಯಿ ಮೌಲ್ಯದ ಶ್ಯೂರಿಟಿ ಬಾಂಡ್ ಮತ್ತು 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಶನಿವಾರ ಜಾಮೀನು ಮಂಜೂರು ಮಾಡಿದೆ.
ತನಿಖಾ ಸಂಸ್ಥೆಯು ನೀಡಿದ ಹಲವು ಸಮನ್ಸ್ ಗಳಿಗೆ ಅವರು ಗೈರಾಗಿದ್ದರು ಎಂದು ಈಡಿ ದೂರುಗಳು ಆರೋಪಿಸಿರುವ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ಖುದ್ದು ಹಾಜರಾಗುವಂತೆ ರೋಸ್ ಅವೆನ್ಯೂ ಕೋರ್ಟ್ ಸೂಚಿಸಿತ್ತು.
ಭಾರೀ ಭದ್ರತೆಯ ನಡುವೆ ಕೇಜ್ರಿವಾಲ್ ಮತ್ತು ಅವರ ವಕೀಲ ರಮೇಶ್ ನ್ಯಾಯಾಲಯದ ಮುಂದೆ ಹಾಜರಾದರು.
Next Story