ಮುರ್ಶಿದಾಬಾದ್ ಡಿಐಜಿ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ
PC: PTI
ಕೋಲ್ಕತ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ನಲ್ಲಿ ಪದೇ ಪದೇ ಹಿಂಸಾಕೃತ್ಯಗಳು ನಡೆಯುತ್ತಿದೆ ಎಂದು ಆರೋಪಿಸಿ ಅಲ್ಲಿನ ಉಪ ಪೊಲೀಸ್ ಮಹಾ ನಿರೀಕ್ಷಕ (ಡಿಐಜಿ)ರನ್ನು ವರ್ಗಾಯಿಸುವಂತೆ ಭಾರತೀಯ ಚುನಾವಣಾ ಆಯೋಗವು ಸೋಮವಾರ ಆದೇಶ ನೀಡಿದೆ. ಅಲ್ಲಿ ನಡೆಯುತ್ತಿರುವ ಘಟನೆಗಳ ಮೇಲೆ ನಿಗಾ ಇಡಲು ವಿಫಲವಾಗಿದ್ದಾರೆ ಎಂದು ಆರೋಪಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಮುರ್ಶಿದಾಬಾದ್ನಲ್ಲಿ ಎರಡು ಹಿಂಸಾತ್ಮಕ ಘಟನೆಗಳು ನಡೆದಿವೆ ಮತ್ತು ಆ ಸಂದರ್ಭಗಳಲ್ಲಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಬಳಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ‘‘ಎರಡು ಹಿಂಸಾತ್ಮಕ ಘಟನೆಗಳಲ್ಲಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಬಳಸಲಾಗಿತ್ತು. ಅದಕ್ಕೆ ಸಂಬಂಧಿಸಿ ನಂತರ ನಡೆಯಬಹುದಾದ ಹಿಂಸಾತ್ಮಕ ಘಟನೆಗಳು ನಡೆಯದಂತೆ ತಕ್ಷಣ ನಿಗಾ ಇಡುವಲ್ಲಿಯೂ ಆ ಪೊಲೀಸ್ ಅಧಿಕಾರಿ ವಿಫಲವಾಗಿದ್ದಾರೆ. ಹಾಗಾಗಿ, ಮುರ್ಶಿದಾಬಾದ್ ಡಿಐಜಿಯನ್ನು ವರ್ಗಾಯಿಸಲು ಚುನಾವಣಾ ಆಯೋಗ ನಿರ್ಧರಿಸಿದೆ” ಎಂದು ಮೂಲಗಳು ತಿಳಿಸಿವೆ.
Next Story