ತೆಲಂಗಾಣದಲ್ಲಿ ಬುಡಕಟ್ಟು ವಿವಿ ಸ್ಥಾಪನೆ : ಸಂಸತ್ತಿನಿಂದ ಮಸೂದೆ ಅಂಗೀಕಾರ
Photo : ANI
ಹೊಸದಿಲ್ಲಿ: ತೆಲಂಗಾಣದಲ್ಲಿ ಸಮ್ಮಕ್ಕ ಸಾರಕ್ಕ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾನಿಲಯ ಆರಂಭಿಸಲು ಅವಕಾಶ ಕಲ್ಪಿಸುವ ಮಸೂದೆಯನ್ನು ಸಂಸತ್ತು ಬುಧವಾರ ಅಂಗೀಕರಿಸಿದೆ.
ಲೋಕಸಭೆಯಲ್ಲಿ ಸಂಭವಿಸಿದ ಭದ್ರತಾ ಲೋಪದ ಕುರಿತು ಗೃಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷದ ಸದಸ್ಯರು ಸಭಾ ತ್ಯಾಗ ನಡೆಸಿದರು. ಈ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ಅವರ ಅನುಪಸ್ಥಿತಿಯಲ್ಲಿ ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು.
ಕೇಂದ್ರೀಯ ವಿಶ್ವವಿದ್ಯಾನಿಲಯ (ತಿದ್ದುಪಡಿ) ಮಸೂದೆ-2023 ಅನ್ನು ಕಳೆದ ವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿತ್ತು.
ಕೇಂದ್ರೀಯ ವಿಶ್ವವಿದ್ಯಾನಿಲಯ (ತಿದ್ದುಪಡಿ) ಮಸೂದೆ-2023ರ ವ್ಯಾಖ್ಯಾನ ಹಾಗೂ ಉದ್ದೇಶದ ಪ್ರಕಾರ ಸಮ್ಮಕ್ಕ ಸಾರಕ್ಕ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾನಿಲಯ ಮುಂಬರುವ ವರ್ಷಗಳಲ್ಲಿ ಪ್ರಾದೇಶಿಕ ಆಶಯಗಳನ್ನು ಈಡೇರಿಸಲಿದೆ.
Next Story