ದಿಲ್ಲಿ ಮದ್ಯ ನೀತಿ ಪ್ರಕರಣ: ಬಿಆರ್ಎಸ್ ನಾಯಕಿ ಕೆ ಕವಿತಾಗೆ ಸುಪ್ರೀಂ ಕೋರ್ಟ್ ಜಾಮೀನು
ಬಿಆರ್ಎಸ್ ನಾಯಕಿ ಕೆ ಕವಿತಾ (Photo: PTI)
ಹೊಸದಿಲ್ಲಿ: ದಿಲ್ಲಿ ಮದ್ಯ ನೀತಿ ಪ್ರಕರಣದಲ್ಲಿ ಬಿಆರ್ಎಸ್ ನಾಯಕಿ ಕೆ ಕವಿತಾಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಿಆರ್ಎಸ್ ನಾಯಕಿ ಕೆ ಕವಿತಾ ಅವರನ್ನು ಮಾರ್ಚ್ 15 ರಂದು ಈಡಿ ಬಂಧಿಸಿತ್ತು.
ಭಾರತ್ ರಾಷ್ಟ್ರ ಸಮಿತಿಯ ನಾಯಕ - ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ, ದಿಲ್ಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಮಾರ್ಚ್ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿದ್ದರು. ಒಂದು ತಿಂಗಳ ನಂತರ ಎರಡನೇ ಬಾರಿಗೆ ಸಿಬಿಐ ಅವರನ್ನು ಬಂಧಿಸಿತ್ತು.
Next Story