ಖಾಲಿಸ್ತಾನಿ ಪರ ಫೇಸ್ ಬುಕ್ ನಲ್ಲಿ ಪೋಸ್ಟ್ : ಸಿಖ್ ವ್ಯಕ್ತಿಯ ವಿರುದ್ಧ ಎಫ್ಐಆರ್
ಸಾಂದರ್ಭಿಕ ಚಿತ್ರ | PC : iStock Photo
ಪಿಲಿಭಿತ್: ಆಯುಧಗಳನ್ನು ಹಿಡಿದುಕೊಂಡ ಫೋಟೋವನ್ನು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ ಖಾಲಿಸ್ತಾನಿ ಪರ ಬೆಂಬಲ ವ್ಯಕ್ತಪಡಿಸಿದ ಆರೋಪದ ಮೇಲೆ ಸಿಖ್ ವ್ಯಕ್ತಿಯ ವಿರುದ್ಧ ಉತ್ತರಪ್ರದೇಶದ ಪಿಲಿಭಿತ್ ಜಿಲ್ಲೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಗುರುಸೇವಕ್ ಸಿಂಗ್ ವಿರುದ್ಧ ಈ ಕುರಿತು ಪ್ರಕರಣ ದಾಖಲಿಸಲಾಗಿದೆ. ಈ ವಿಷಯದ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಯುತ್ತಿದೆ ಎಂದು ಕೊತ್ವಾಲಿ ಸ್ಟೇಷನ್ ಹೌಸ್ ಆಫೀಸರ್ ರಾಜೀವ್ ಕುಮಾರ್ ಸಿಂಗ್ ಹೇಳಿದ್ದಾರೆ.
ಡಿಸೆಂಬರ್ 23ರಂದು ಪಿಲಿಭಿತ್ ನ ಪುರನ್ ಪುರ ಪ್ರದೇಶದಲ್ಲಿ ಉತ್ತರಪ್ರದೇಶ ಪೊಲೀಸರು ಮತ್ತು ಪಂಜಾಬ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಮೂವರು ಖಾಲಿಸ್ತಾನಿ ಬೆಂಬಲಿಗರನ್ನು ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಹರ್ಯಾಣ ಸಿರ್ಸಾದ ನಿವಾಸಿ ಗುರುಸೇವಕ್ ಸಿಂಗ್ ಫೇಸ್ ಬುಕ್ ನಲ್ಲಿ ಖಾಲಿಸ್ತಾನಿ ಪರ ಪೋಸ್ಟ್ ಹಾಕುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಇದರ ಬೆನ್ನಲ್ಲೇ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.