ಲೋಕಸಭೆಯಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆ ಮಂಡನೆ
ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ (Photo credit: X/ANI)
ಹೊಸದಿಲ್ಲಿ: ವಿವಾದಿತ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆಯನ್ನು ಲೋಕಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಮಂಡಿಸಿದ್ದಾರೆ.
'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆ, ಏಕಕಾಲಕ್ಕೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಚುನಾವಣೆಗಳನ್ನು ನಡೆಸುವ ಬಗ್ಗೆ ಪ್ರಸ್ತಾಪಿಸುತ್ತದೆ. ಮಸೂದೆ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಮೋದಿ ನೇತೃತ್ವದ ಕೇಂದ್ರ ಸಂಪುಟ ಕೆಲ ದಿನಗಳ ಹಿಂದೆಯಷ್ಟೇ ಅಂಗೀಕರಿಸಿತ್ತು.
ಮಸೂದೆ ಮಂಡನೆ ಹಿನ್ನೆಲೆ ಸಂಸತ್ತಿನಲ್ಲಿ ಮಸೂದೆ ಮೇಲೆ ಚರ್ಚೆ ನಡೆಯಲಿದೆ.
Next Story