ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (PTI)
ಪಿತ್ರೊಗಢ್ (ಉತ್ತರಾಖಂಡ): ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗೂ ಉತ್ತರಾಖಂಡ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವಿಜಯ್ ಕುಮಾರ್ ಜೋಗ್ದಂದ್ ಅವರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಬುಧವಾರ ಉತ್ತರಾಖಂಡದ ಪಿತ್ರೊಗಢ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.
ಹೆಲಿಕಾಪ್ಟರ್ನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಉತ್ತರಾಖಂಡ ಸರಕಾರ ತಿಳಿಸಿದೆ. ರಾಜೀವ್ ಕುಮಾರ್ ಹಾಗೂ ವಿಜಯ್ ಕುಮಾರ್ ಜೋಗ್ದಂದ್ ಅವರು ಹೆಲಿಕಾಪ್ಟರ್ನಲ್ಲಿ ಮುನ್ಸಿಯಾರಿಗೆ ತೆರಳುತ್ತಿದ್ದರು.
Next Story