ಜಾರ್ಖಂಡ್ ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ
Photo credit: ANI
ರಾಂಚಿ: ಜಾರ್ಖಂಡ್ ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ರಾಂಚಿಯ ಮೊರಾಬಾಡಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ನಾಯಕ ಹೇಮಂತ್ ಸೊರೆನ್(49) ನಾಲ್ಕನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಪ್ರಮಾಣ ವಚನ ಬೋಧಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಭಾಗವಹಿಸಿದ್ದರು.
Next Story