"ನಾನು ಓರ್ವ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ": ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಗಾಂಧಿ ಸಂತಾಪ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ , ಮನಮೋಹನ್ ಸಿಂಗ್ | PTI
ಹೊಸದಿಲ್ಲಿ: "ನಾನು ಓರ್ವ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ" ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.
ಮನಮೋಹನ್ ಸಿಂಗ್ ಅವರು ಅಪಾರ ಬುದ್ಧಿವಂತಿಕೆ ಹಾಗೂ ದೃಢತೆಯಿಂದ ಭಾರತವನ್ನು ಮನ್ನಡೆಸಿದರು. ಅವರ ನಮ್ರತೆ ಹಾಗೂ ಅರ್ಥಶಾಸ್ತ್ರದ ಆಳವಾದ ತಿಳುವಳಿಕೆಯು ದೇಶವನ್ನು ಪ್ರೇರೇಪಿಸಿದೆ. ನಾನು ಓರ್ವ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ. ಅವರನ್ನು ಮೆಚ್ಚಿದ ಲಕ್ಷಾಂತರ ಜನರು ಅವರನ್ನು ಅತ್ಯಂತ ಹೆಮ್ಮೆಯಿಂದ ನೆನಪಿಸಿಕೊಳ್ಳುತ್ತಾರೆ. ನಾನು ಅವರ ಪತ್ನಿ ಹಾಗೂ ಕುಟಂಬಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Manmohan Singh Ji led India with immense wisdom and integrity. His humility and deep understanding of economics inspired the nation.
— Rahul Gandhi (@RahulGandhi) December 26, 2024
My heartfelt condolences to Mrs. Kaur and the family.
I have lost a mentor and guide. Millions of us who admired him will remember him with the… pic.twitter.com/bYT5o1ZN2R
ಭಾರತ ಕಂಡ ಶ್ರೇಷ್ಠ ಅರ್ಥ ಶಾಸ್ತ್ರಜ್ಞರಲ್ಲಿ ಒಬ್ಬರು ಹಾಗೂ ಒಂದು ದಶಕದ ಕಾಲ ದೇಶದ ಪ್ರಧಾನಿಯಾಗಿದ್ದ ಡಾ. ಮನಮೋಹನ್ ಸಿಂಗ್ ಗುರುವಾರ ರಾತ್ರಿ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.