ಐಐಟಿ ದಿಲ್ಲಿ ವಿದ್ಯಾರ್ಥಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
Photo: PTI
ಹೊಸದಿಲ್ಲಿ: ಐಐಟಿ ದಿಲ್ಲಿಯ ವಿದ್ಯಾರ್ಥಿಯೋರ್ವನ ಶವವು ಶನಿವಾರ ತಡರಾತ್ರಿ ಕ್ಯಾಂಪಸ್ ನಲ್ಲಿಯ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಆಯುಷ್ ಅಷ್ನಾ (20) ಈ ವರ್ಷ ಬಿ.ಟೆಕ್ ಅಂತಿಮ ಪರೀಕ್ಷೆಗೆ ಹಾಜರಾಗಿದ್ದ. ಆಯುಷ್ ಕೋಣೆಯಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದರು.
ಸಾವಿನ ನಿಖರವಾದ ಕಾರಣವನ್ನು ತಿಳಿದುಕೊಳ್ಳಲು ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದರು.
Next Story