ಭಾರತ ತಂಡದ ನಾಯಕ ರೋಹಿತ್ ಶರ್ಮ ಟಿ-20 ಕ್ರಿಕೆಟ್ ನಲ್ಲಿ ಆಡುವುದು ಅನುಮಾನ!
ರೋಹಿತ್ ಶರ್ಮ | Photo: PTI
ಮುಂಬೈ: ಭಾರತ ತಂಡದ ನಾಯಕ ರೋಹಿತ್ ಶರ್ಮ ಸ್ವಯಂಪ್ರೇರಿತವಾಗಿ ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು indiatoday.in ವರದಿ ಮಾಡಿದೆ.
ಏಕದಿನ ಹಾಗೂ ಟೆಸ್ಟ್ ಮಾದರಿಗಳಲ್ಲಿ ಭಾರತ ತಂಡದ ನಾಯಕರಾಗಿರುವ ರೋಹಿತ್ ಶರ್ಮ, ಏಕದಿನ ವಿಶ್ವಕಪ್ ಕ್ರೀಡಾಕೂಟ ಪ್ರಾರಂಭಗೊಳ್ಳವುದಕ್ಕೂ ಮುನ್ನವೇ, ಈ ಚುಟುಕು ಕ್ರಿಕೆಟ್ ನಲ್ಲಿ ತಾವು ಇನ್ನು ಮುಂದೆ ಆಡುವುದಿಲ್ಲ ಎಂದು ನಿರ್ಧರಿಸಿದ್ದರು. ಅದರಲ್ಲಿನ ತಮ್ಮ ಭವಿಷ್ಯದ ಕುರಿತು ಚರ್ಚಿಸಿದ್ದರು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ನವೆಂಬರ್ 2022ರಲ್ಲಿ ನಡೆದ ಟಿ-20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವು ಹೊರಬಿದ್ದಾಗಿನಿಂದ ಇಲ್ಲಿಯವರೆಗೆ ರೋಹಿತ್ ಶರ್ಮ ಯಾವುದೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಆಡಿಲ್ಲ. ಅಲ್ಲಿಂದಾಚೆಗೆ ಟಿ-20 ಕ್ರಿಕೆಟ್ ನಲ್ಲಿ ಭಾರತ ತಂಡವನ್ನು ಬಹುತೇಕ ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದಾರೆ.
36 ವರ್ಷದ ಭಾರತ ತಂಡದ ನಾಯಕ ರೋಹಿತ್ ಶರ್ಮ ಇಲ್ಲಿಯವರೆಗೆ 148 ಟಿ-20 ಕ್ರಿಕೆಟ್ ಪಂದ್ಯಗಳಲ್ಲಿ ಆಟವಾಡಿದ್ದು, 140 ಸ್ಟ್ರೈಕ್ ರೇಟ್ ನಲ್ಲಿ ನಾಲ್ಕು ಶತಕಗಳೊಂದಿಗೆ 3,853 ರನ್ ಪೇರಿಸಿದ್ದಾರೆ.