ಜೈಪುರ | ರಾಸಾಯನಿಕ ಹೊತ್ತೊಯ್ಯುತ್ತಿದ್ದ ಟ್ರಕ್ ಹಲವು ವಾಹನಗಳಿಗೆ ಢಿಕ್ಕಿ: ಮೃತರ ಸಂಖ್ಯೆ 8ಕ್ಕೆ ಏರಿಕೆ
ಸುಮಾರು 30 ಟ್ರಕ್ ಗಳು ಬೆಂಕಿಗಾಹುತಿ
Photo: PTI
ಜೈಪುರ: ಶನಿವಾರ ಬೆಳಗ್ಗೆ ಜೈಪುರ-ಅಜ್ಮೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಸಾಯನಿಕ ಹೊತ್ತೊಯ್ಯುತ್ತಿದ್ದ ಟ್ರಕ್ ಒಂದು ಇತರ ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, 41 ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿಸುಮಾರು 30 ಟ್ರಕ್ ಗಳು ಬೆಂಕಿಗಾಹುತಿಯಾಗಿವೆ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜೈಪುರ ಜಿಲ್ಲಾಧಿಕಾರಿ ಜಿತೇಂದ್ರ ಸೋನಿ, ಈ ಘಟನೆಯಲ್ಲಿ 41 ಮಂದಿ ಗಾಯಗೊಂಡಿದ್ದು, ಅವರನ್ನೆಲ್ಲ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಅಪಘಾತದಲ್ಲಿ ಬೆಂಕಿಯ ಜ್ವಾಲೆಗಳು ತೀವ್ರವಾಗಿ ವ್ಯಾಪಿಸಿರುವುದರಿಂದ, ಹೆದ್ದಾರಿಯಲ್ಲಿನ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಉದ್ದನೆಯ ಸರತಿ ಸಾಲಿನಲ್ಲಿ ವಾಹನಗಳು ನಿಂತಿವೆ.
Next Story