ಜಮ್ಮು-ಕಾಶ್ಮೀರದಲ್ಲಿ ಭೂಕಂಪ
ಸಾಂದರ್ಭಿಕ ಚಿತ್ರ
ಶ್ರೀನಗರ : ಜಮ್ಮು ಹಾಗೂ ಕಾಶ್ಮೀರದಲ್ಲಿ ಬುಧವಾರ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದೆ.
ಆದರೆ, ಯಾವುದೇ ಸಾವು ನೋವುಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಭೂಕಂಪ ಅಫಘಾನಿಸ್ತಾನದ ವಲಯದಲ್ಲಿ ಬೆಳಗ್ಗೆ 10.43ಕ್ಕೆ ಸಂಭವಿಸಿತು ಎಂದು ಅವರು ಹೇಳಿದ್ದಾರೆ.
ಕಾಶ್ಮೀರ ಕಣಿವೆಯಲ್ಲಿ ಭೂಕಂಪನದ ಅನುಭವವಾಯಿತು. ಇದರಿಂದ ಜನರು ಆತಂಕಗೊಂಡರು. ತಮ್ಮ ಮನೆ ಹಾಗೂ ಕಟ್ಟಡಗಳಿಂದ ಹೊರಗೆ ಓಡಿ ಬಂದರು ಎಂದು ಅವರು ತಿಳಿಸಿದ್ದಾರೆ.
Next Story