ಜಮ್ಮು ಮತ್ತು ಕಾಶ್ಮೀರ ರಾಜ್ಯ ಸ್ಥಾನಮಾನವನ್ನು ಪಡೆಯಲಿದೆ, ಶೀಘ್ರದಲ್ಲೇ ವಿಧಾನಸಭಾ ಚುನಾವಣೆ: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ (PTI)
ಹೊಸದಿಲ್ಲಿ: ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯದ ಸ್ಥಾನಮಾನವನ್ನು ಪುನರ್ ಸ್ಥಾಪಿಸಲಾಗುವುದು ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಈ ಪ್ರಕ್ರಿಯೆಯ ನಂತರ ಕಣಿವೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಸಲಾಗುವುದು ಎಂದು ಪ್ರಕಟಿಸಿದ್ದಾರೆ.
ಉಧಂಪುರ್ ನಲ್ಲಿ ಸಾರ್ವಜನಿಕ ಸಮಾವೇಶವೊಂದನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಲ್ಲಿಯವರೆಗೆ ಏನಾಗಿದೆಯೊ ಅದು ಕೇವಲ ಟ್ರೇಲರ್. ನಾನು ಹೊಸ ಜಮ್ಮು ಮತ್ತು ಕಾಶ್ಮೀರದ ನೂತನ ಹಾಗೂ ಅದ್ಭುತ ಚಿತ್ರಣವನ್ನು ಸೃಷ್ಟಿಸುವಲ್ಲಿ ಮಗ್ನನಾಗಿದ್ದೇನೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ದಿನಗಳು ದೂರ ಉಳಿದಿಲ್ಲ. ಜಮ್ಮು ಮತ್ತು ಕಾಶ್ಮೀರವು ರಾಜ್ಯದ ಸ್ಥಾನಮಾನವನ್ನು ಮರಳಿ ಪಡೆಯಲಿದೆ. ನಿಮ್ಮ ಶಾಸಕರು ಹಾಗೂ ಸಚಿವರೊಂದಿಗೆ ನಿಮ್ಮ ಕನಸುಗಳನ್ನು ಹಂಚಿಕೊಳ್ಳಲು ಸಾಧ್ಯವಾಗಲಿದೆ..” ಎಂದು ಭರವಸೆ ನೀಡಿದ್ದಾರೆ.
Next Story