ಝಾನ್ಸಿ ಆಸ್ಪತ್ರೆ ಅಗ್ನಿ ದುರಂತ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ರಾಷ್ಟ್ರೀಯ ಮಾನವ ಹಕ್ಕು ಆಯೋಗ
PC : PTI
ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಮಹಾರಾಣಿ ಲಕ್ಷ್ಮಿಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಈವರೆಗೆ 10 ನವಜಾತ ಶಿಶುಗಳು ಮೃತಪಟ್ಟಿದ್ದು, ಈ ಸಂಬಂಧ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಶನಿವಾರ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.
ಶುಕ್ರವಾರ ರಾತ್ರಿ ಸುಮಾರು 10.45ರ ವೇಳೆಗೆ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಈ ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂದು ಶಂಕಿಸಲಾಗಿದೆ.
ಈ ದುರಂತದಲ್ಲಿ ಈವರೆಗೆ 10 ನವಜಾತ ಶಿಶುಗಳು ಮೃತಪಟ್ಟಿದ್ದು, 16 ನವಜಾತ ಶಿಶುಗಳು ಗಂಭೀರವಾಗಿ ಗಾಯಗೊಂಡಿವೆ.
Next Story