ಜಾರ್ಖಂಡ್: ಶಿಕ್ಷಕನಿಂದಲೇ ಇಬ್ಬರು ಸಹದ್ಯೋಗಿಗಳ ಗುಂಡಿಕ್ಕಿ ಹತ್ಯೆ
ರಾಂಚಿ : ಸರಕಾರಿ ಶಾಲಾ ಶಿಕ್ಷಕನೊಬ್ಬ ತನ್ನ ಇಬ್ಬರು ಸಹದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆಗೈದಿದ್ದು, ಆ ಬಳಿಕ ತನಗೆ ತಾನೇ ಗುಂಡಿಕ್ಕಿಕೊಂಡು ಗಂಭೀರವಾಗಿ ಗಾಯಗೊಂಡ ಘಟನೆ ಜಾರ್ಖಂಡ್ನ ಗೊಂಡಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಪೊರಾಯಿಹಾಟ್ ಪ್ರದೇಶದ ಮೇಲ್ದರ್ಜೆಯ ಹೈಸ್ಕೂಲ್ನಲ್ಲಿ ಬೆಳಗ್ಗೆ 11:00 ಗಂಟೆಯ ವೇಳೆಗೆ ಈ ಘಟನೆ ನಡೆದಿದೆಯೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಓರ್ವ ಮಹಿಳೆ ಸೇರಿದಂತೆ ಇಬ್ಬರು ಶಿಕ್ಷಕರ ಮೃತದೇಹಗಳು ಶಾಲೆಯ ಕೊಠಡಿಯೊಂದರಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಆರೋಪಿ ಶಿಕ್ಷಕನೂ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.
Next Story