ಈಡಿ ಮುಂದೆ ವಿಚಾರಣೆಗೆ ಹಾಜರಾದ ಕಾರ್ತಿ ಚಿದಂಬರಂ
ಕಾರ್ತಿ ಚಿದಂಬರಂ | Photo: PTI
ಹೊಸದಿಲ್ಲಿ: ಕೆಲವು ಚೀನಾ ಪ್ರಜೆಗಳಿಗೆ 2011ರಲ್ಲಿ ವಿಸಾ ನೀಡಿರುವುದಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆ ಎದುರಿಸಲು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಮಂಗಳವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾದರು.
ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರದ ಶಾಸಕರಾಗಿರುವ 52 ವರ್ಷದ ಕಾರ್ತಿ ಚಿದಂಬರಂ ಅವರು ಕಳೆದ ವರ್ಷ 23ರಂದು ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸಿದ್ದರು. ಅವರ ಹೇಳಿಕೆಯನ್ನು ಜಾರಿ ನಿರ್ದೇಶನಾಲಯ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ನಿಯಮಗಳ ಅಡಿಯಲ್ಲಿ ದಾಖಲಿಸಿಕೊಂಡಿತ್ತು.
ಅವರು ಮತ್ತೊಮ್ಮೆ ಕೇಂದ್ರ ದಿಲ್ಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಬಿಐ ದಾಖಲಿಸಿದ ಎಫ್ಐಆರ್ನ ಆಧಾರದಲ್ಲಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕಾರ್ತಿ ಚಿದಂಬರಂ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿದೆ.
Next Story