ಕೇರಳ:ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಹಿರಿಯ ಪೋಲಿಸ್ ಅಧಿಕಾರಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ
ತ್ರಿಶೂರು: ಹಿರಿಯ ಪೋಲಿಸ್ ಅಧಿಕಾರಿಯೋರ್ವರು ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಲಿಸರು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ತಡರಾತ್ರಿ ವಡಕ್ಕಂಚೇರಿ ಬಳಿ ಈ ಘಟನೆ ಸಂಭವಿಸಿದೆ.
ಮೃತರನ್ನು ಪೋಲಿಸ್ ನಿಯಂತ್ರಣ ಕೊಠಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಸಿವಿಲ್ ಪೋಲಿಸ್ ಅಧಿಕಾರಿ(ಸಿಪಿಒ) ರಮೇಶ್ ಬಾಬು ಎಂದು ಗುರುತಿಸಲಾಗಿದೆ.
ತನಿಖೆಯು ಪ್ರಗತಿಯಲ್ಲಿದ್ದು,ಘಟನಾ ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೋಲಿಸ್ ಅಧಿಕಾರಿಯೋರ್ವರು ತಿಳಿಸಿದರು.
Next Story