ಸಿಕ್ಕಿಂನಲ್ಲಿ ಭಾರೀ ಮಳೆಯಿದಾಗಿ ವಿವಿಧೆಡೆ ಭೂಕುಸಿತ: ಕನಿಷ್ಠ 6ಮಂದಿ ಸಾವು
PC: PTI
ಗ್ಯಾಂಗ್ಟಕ್: ಉತ್ತರ ಸಿಕ್ಕಿಂನ ಮಾಂಗಾನ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತಗಳಲ್ಲಿ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಇತರ ಐದು ಮಂದಿ ನಾಪತ್ತೆಯಾಗಿದ್ದಾರೆ.ಮಾಂಗಾನ್ ಜಿಲ್ಲೆಯಲ್ಲಿ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದ್ದು, ಅಲ್ಲಿ ಸುಮಾರು 2 ಸಾವಿರ ಮಂದಿ ಪ್ರವಾಸಿಗರು ಸಿಕ್ಕಿಹಾಕಿಕೊಂಡಿದ್ದಾರೆಂದು ತಿಳಿದುಬಂದಿದೆ.ಪಕ್ಶೆಪ್ ಹಾಗೂ ಅಂಭಿತಾಂಗ್ ಗ್ರಾಮಗಳಲ್ಲಿ ಸಂಭವಿಸಿದ ಭೂಕುಸಿತದ ಘಟನೆಗಳಲ್ಲಿ ತಲಾ ಮೂವರು ಮೃತಪಟ್ಟಿದ್ದಾರೆಂದು ಮಾಂಗಾನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಮ್ ಕುಮಾರ್ ಚೇಟ್ರಿ ತಿಳಿಸಿದ್ದಾರೆ. ಪರಿಸ್ಥಿತಿಯ ಪರಾಮರ್ಶೆ ನಡೆಸಲು ಅವರು ವಿವಿಧ ಇಲಾಖೆಗಳ ಸಭೆಯನ್ನು ನಡೆಸಿದರು.
ಲಾಚೆನ್ ಹಗಾಗೂ ಲುಚುಂಗ್ನಂತಹ ಸ್ಥಳಗಳಲ್ಲಿ 2 ಸಾವಿರಕ್ಕೂ ಅಧಿಕ ಪ್ರವಾಸಿಗರು ಸಿಕ್ಕಿಹಾಕಿಕೊಂಡಿದ್ದಾರೆಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ. ಆದರೆ ಅವರೆಲ್ಲರೂ ಸುರಕ್ಷಿತರಾಗಿದ್ದಾರೆಂದು ಅವರು ಹೇಳಿದ್ದಾರೆ.
ನಿರಾಶ್ರಿತರಿಗಾಗಿ ಜಿಲ್ಲೆಯ ಪಕ್ಶೇಪ್ ಪ್ರದೇಶದಲ್ಲಿ ಪರಿಹಾರ ಶಿಬಿರವೊಂದನ್ನು ತೆರೆಯಲಾಗಿದೆಯೆಂದು ಅವರು ತಿಳಿಸಿದ್ದಾರೆ. ಮಾಂಗಾನ್ಗೆ ತೆರಳುವ ರಸ್ತೆಯ ಹಲವು ಸ್ಥಳಗಳಲ್ಲಿ ಪ್ರವಾಹದಿಂದಾಗಿ ಕೊಚ್ಚಿಹೋಗಿದೆ. ಇದರಿಂದಾಗಿ ಹಲವು ಪ್ರದೇಶಗಳಿಗೆ ವಾಹನ ತಲುಪಲು ಅಸಾಧ್ಯವಾದುದರಂದ ಪೂರೈಕೆ ಮಾರ್ಗವು ಕಡಿದುಹೋಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂಪರ್ಕ ಕಡಿದುಹೋದ ಪ್ರದೇಶಗಳನ್ನು ಸಂಪರ್ಕಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ತೆರೆಯಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆಯೆಂದು ಅವರು ಹೇಳಿದ್ದಾರೆ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವನ್ನು ಒದಗಿಸಲು ಪ್ರಯತ್ನಗಳು ನಡೆಯುತ್ತಿರುವುದಾಗಿ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಹೇಳಿದ್ದಾರೆ.
ಪಶ್ಚಿಮಬಂಗಾಳ, ಸಿಕ್ಕಿ ಹಾಗೂ ಈಶಾನ್ಯ ಪ್ರಾಂತದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.