ಬಾಬಾ ಸಿದ್ದಿಕ್ ಮೇಲೆ ಗುಂಡು ಹಾರಿಸಿದ ಆರೋಪಿಯ ಬಂಧನ
ನೇಪಾಳಕ್ಕೆ ಪಲಾಯನ ಮಾಡಲು ಯತ್ನಿಸುತ್ತಿದ್ದಾಗ ಉತ್ತರ ಪ್ರದೇಶದಲ್ಲಿ ಸೆರೆ
ಬಾಬಾ ಸಿದ್ದೀಕ್ | PC : PTI
ಲಕ್ನೋ : ಅಕ್ಟೋಬರ್ 12 ರಂದು ಎನ್ಸಿಪಿ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕ್ ಮೇಲೆ, ಅವರ ಮಗನ ಕಚೇರಿಯ ಹೊರಗೆ ಗುಂಡು ಹಾರಿಸಿದ ಆರೋಪಿಯನ್ನು ರವಿವಾರ ಬಂಧಿಸಲಾಗಿದೆ.
ಬಂಧಿತನನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ.
ಆರೋಪಿಯು ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಉತ್ತರ ಪ್ರದೇಶ ಎಸ್ಟಿಎಫ್ನೊಂದಿಗಿನ ಜಂಟಿ ಕಾರ್ಯಾಚರಣೆಯಲ್ಲಿ, ಮುಂಬೈ ಅಪರಾಧ ವಿಭಾಗದ ತಂಡವು ಶಿವಕುಮಾರ್ಗೆ ಆಶ್ರಯ ನೀಡಿ ನೇಪಾಳಕ್ಕೆ ಪರಾರಿಯಾಗಲು ಸಹಾಯ ಮಾಡಿದ್ದಕ್ಕಾಗಿ ಅನುರಾಗ್ ಕಶ್ಯಪ್, ಜ್ಞಾನ್ ಪ್ರಕಾಶ್ ತ್ರಿಪಾಠಿ, ಆಕಾಶ್ ಶ್ರೀವಾಸ್ತವ ಮತ್ತು ಅಖಿಲೇಶೇಂದ್ರ ಪ್ರತಾಪ್ ಸಿಂಗ್ ಅವರನ್ನೂ ಬಂಧಿಸಿದೆ.
Next Story