ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಭಾರಿ ಬೆಂಕಿ ಅವಘಡ; ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ

Photo credit: PTI
ಲಕ್ನೋ : ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ರವಿವಾರ ಸಂಜೆ ಮಹಾ ಕುಂಭಮೇಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಅವಘಡಕ್ಕೆ ಜನರು ಗಾಬರಿಯಾಗಿದ್ದು, ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಬೆಂಕಿ ನಂದಿಸಲು ಹಲವಾರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ತಲುಪಿವೆ.
ಸ್ಥಳೀಯ ಅಧಿಕಾರಿಗಳು, ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳೊಂದಿಗೆ ಬೆಂಕಿ ನಂದಿಸಲು ಪ್ರಯತ್ನಗಳನ್ನು ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.
Next Story