ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಕಚೇರಿ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ

ದೇವೇಂದ್ರ ಫಡ್ನವಿಸ್ (PTI)
ಮುಂಬೈ : ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಕಚೇರಿ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಸಂದೇಶ ಬಂದ ಹಿನ್ನೆಲೆ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಮಲಿಕ್ ಶಹಬಾಜ್ ಹುಮಾಯೂನ್ ರಾಜಾ ದೇವ್' ಎಂದು ಹೇಳಿಕೊಂಡು ವ್ಯಕ್ತಿಯೋರ್ವ ಮುಂಬೈ ಟ್ರಾಫಿಕ್ ಪೊಲೀಸರಿಗೆ ವಾಟ್ಸಾಪ್ ಮೂಲಕ ಸಿಎಂ ಕಚೇರಿಗೆ ದಾಳಿ ಮಾಡುವುದಾಗಿ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾನೆ. ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿರುವುದಾಗಿ ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ.
ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ. ಇದರ ಬೆನ್ನಲ್ಲೇ ಗುಪ್ತಚರ ಸಂಸ್ಥೆ ಮತ್ತು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story