ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸೋನಿಯಾ, ರಾಹುಲ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

ರಾಹುಲ್ ಗಾಂಧಿ , ಸೋನಿಯಾ ಗಾಂಧಿ | PTI
ಹೊಸದಿಲ್ಲಿ: ನ್ಯಾಶನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸ್ಯಾಮ್ ಪಿತ್ರೋಡಾ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎಪ್ರಿಲ್ 9ರಂದು ದಿಲ್ಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಆರೋಪ ಪಟ್ಟಿ ಕುರಿತು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ವಿಚಾರಣೆಯನ್ನು ಎಪ್ರಿಲ್ 15ಕ್ಕೆ ಮುಂದೂಡಿದ್ದಾರೆ.
ಬಿಜೆಪಿ ನಾಯಕ ಸುಬ್ರಹ್ಮಣೀಯನ್ ಸ್ವಾಮಿ ನೀಡಿದ ದೂರಿನ ಆಧಾರದಲ್ಲಿ ಈ ಪ್ರಕರಣ ದಾಖಲಾಗಿದೆ.
Next Story