ಹರ್ಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ
Photo: PTI
ಚಂಡೀಗಢ: ಹರ್ಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕರಿಸಿದರು. ಪಂಚಕುಲದಲ್ಲಿ ಆಯೋಜಿಸಲಾಗಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಬಿಜೆಪಿ ಗಣ್ಯರು ಹಾಗೂ NDA ಮಿತ್ರಪಕ್ಷಗಳು ಉಪಸ್ಥಿತರಿದ್ದವು.
ಪಂಚಕುಲದಲ್ಲಿ ದೇಶದ ಅನೇಕ ಗಣ್ಯರು ನೆರೆದಿದ್ದರಿಂದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭಾರಿ ಬಿಗಿ ಭದ್ರತೆ ಒದಗಿಸಲಾಗಿತ್ತು.
ಹರ್ಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ನಯಾಬ್ ಸಿಂಗ್ ಸೈನಿಗೆ ಪ್ರಮಾಣ ವಚನ ಬೋಧಿಸಿದರು.
Next Story