ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ, ಗ್ರಂಥಾಲಯದ ಹೆಸರನ್ನು ಬದಲಾಯಿಸಿದ ಕೇಂದ್ರ ಸರಕಾರ
Photo: Twitter
ಹೊಸದಿಲ್ಲಿ: ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯವನ್ನು (ಎನ್ಎಂಎಂಎಲ್) ಅಧಿಕೃತವಾಗಿ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಲಾಗಿದೆ ಎಂದು ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯದ (ಎನ್ಎಂಎಂಎಲ್) ಕಾರ್ಯಕಾರಿ ಮಂಡಳಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಇಂಡಿಯಾ ಟುಡೇಗೆ ತಿಳಿಸಿದರು.
ಭಾರತದ 77 ನೇ ಸ್ವಾತಂತ್ರ್ಯ ದಿನದಂದು ಈ ಹೆಸರನ್ನು ಅಧಿಕೃತಗೊಳಿಸಲಾಗಿದೆ.
ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಲೈಬ್ರರಿಯ ಕಾರ್ಯಕಾರಿ ಮಂಡಳಿಯ ಉಪಾಧ್ಯಕ್ಷರು ಕೂಡ ಈ ಕುರಿತು ಪೋಸ್ಟ್ ಮಾಡಿ.
"ನೆಹರೂ ಮೆಮೋರಿಯಲ್ ಮ್ಯೂಸಿಯಂ ಹಾಗೂ ಲೈಬ್ರರಿ (NMML) ಈಗ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (PMML) ಸೊಸೈಟಿ ಆಗಿ ಆಗಸ್ಟ್ 14, 2023 ರರಂದು ಜಾರಿಗೆ ಬರುವಂತೆ ಬದಲಾಯಿಸಲಾಗಿದೆ ಎಂದು ತಿಳಿಸಿದ್ದಾರೆ.
ಜೂನ್ ತಿಂಗಳಲ್ಲಿ NMML ಸೊಸೈಟಿಯ ವಿಶೇಷ ಸಭೆಯಲ್ಲಿ ಅದರ ಹೆಸರನ್ನು PMML ಸೊಸೈಟಿ ಎಂದು ಬದಲಾಯಿಸಲು ನಿರ್ಧರಿಸಲಾಯಿತು. ಸೊಸೈಟಿಯ ಉಪಾಧ್ಯಕ್ಷ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಹೊಸ ಹೆಸರಿನ ಮೇಲೆ ಅಂತಿಮವಾಗಿ ಅಧಿಕೃತ ಮುದ್ರೆ ಹಾಕಲು ಕೆಲವು ಆಡಳಿತಾತ್ಮಕ ಪ್ರಕ್ರಿಯೆಗಳ ಅಗತ್ಯವಿದೆ ಎಂದು ಮೂಲಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿವೆ ಮತ್ತು ಅಂತಿಮ ಅನುಮೋದನೆ ಕೆಲವು ದಿನಗಳ ಹಿಂದೆ ಆಗಿದೆ.