ಮುಂಬೈ | ಡಿಮಾರ್ಟ್ ಎದುರು ಗುಂಡಿನ ದಾಳಿ: ಓರ್ವನಿಗೆ ಗಾಯ
Photo credit: ANI
ಮುಂಬೈ: ಇಂದು ಮುಂಬೈನ ಸಂಪದ ಪ್ರದೇಶದಲ್ಲಿರುವ ಡಿಮಾರ್ಟ್ ಎದುರು ನಡೆದಿರುವ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
"ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸಂಪದ ಪ್ರದೇಶದಲ್ಲಿ ಓರ್ವ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ, ಅವರು ಗಾಯಗೊಂಡಿದ್ದಾರೆ" ಎಂದು ನವಿ ಮುಂಬೈನ ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತ ಅಮಿತ್ ಕಾಳೆ ತಿಳಿಸಿದ್ದಾರೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.
ಘಟನೆಯ ಕುರಿತು ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.
Next Story