ಸಿಎಂ ಹುದ್ದೆಯಿಂದ ಕೇಜ್ರಿವಾಲ್ ವಜಾಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ
ಅರವಿಂದ್ ಕೇಜ್ರಿವಾಲ್ | PC : PTI
ಹೊಸದಿಲ್ಲಿ: ದಿಲ್ಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ)ದಿಂದ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ದಿಲ್ಲಿಯ ರೋಸ್ ಅವೆನ್ಯೂ ಕೋರ್ಟ್ ನೀಡಿರುವ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಒಲವು ಹೊಂದಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಪೀಠವು ಉಲ್ಲೇಖಿಸಿದೆ.
ದಿಲ್ಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ(ಈಡಿ) ಬಂಧಿಸಿತ್ತು. ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ಕಾಂತ್ ಎಂಬುವವರು ಸುಪ್ರೀಂ ಕೋರ್ಟ್ಗೆ ಸಾವರ್ಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಈಗಾಗಲೇ ಸಿಎಂ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಕೇಜ್ರಿವಾಲ್ ಬಿಡುಗಡೆಯಾಗಿದ್ದಾರೆ.
Next Story