10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಶ್ರೀನಗರದಲ್ಲಿ ಪ್ರಧಾನಿ ಮೋದಿ ಯೋಗಭ್ಯಾಸ
Photo: PTI
ಹೊಸದಿಲ್ಲಿ: 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಯೋಗಭ್ಯಾಸ ಮಾಡಿದರು.
ದಾಲ್ ಸರೋವರದ ದಡದಲ್ಲಿನ ಶೇರ್-ಇ-ಕಾಶ್ಮೀರ್ ಇಂಟರ್ ನ್ಯಾಶನಲ್ ಕಾನ್ಫರೆನ್ಸ್ ಸೆಂಟರ್ ನಲ್ಲಿ ಬೆಳಗ್ಗೆ 6.30 ಗಂಟೆಗೆ ಆಯೋಜಿಸಲಾಗಿದ್ದ ಈ ಕಾರ್ಯಕ್ರಮಕ್ಕೆ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಡಚಣೆಯುಂಟಾಯಿತು.
ನಂತರ ಯೋಗ ಕಾರ್ಯಕ್ರಮವನ್ನು ಒಳಾಂಗಣಕ್ಕೆ ಸ್ಥಳಾಂತರಿಸಲಾಯಿತು.
ಮಳೆ ನಿಂತ ನಂತರ, ದಾಲ್ ಸರೋವರದಿಂದ ಯೋಗ ದಿನಾಚರಣೆಯ ಭಾವಚಿತ್ರಗಳನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.
Next Story