16ನೇ ಬ್ರಿಕ್ಸ್ ಶೃಂಗಸಭೆ ಸಭೆ: ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
Photo: PTI
ಹೊಸದಿಲ್ಲಿ: 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಕಜಾನ್ ನಗರಕ್ಕೆ ತೆರಳಿದ್ದಾರೆ.
ಮೋದಿ ರಷ್ಯಾ ಭೇಟಿ ಅವಧಿಯಲ್ಲಿ ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ಮತ್ತು ಇತರ ಆಹ್ವಾನಿತ ನಾಯಕರ ಜೊತೆ ಮಾತುಕತೆ ನಡೆಸುವ ನಿರೀಕ್ಷೆಯಿದೆ.
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನೇತೃತ್ವದಲ್ಲಿ ನಡೆಯಲಿರುವ ‘ಬ್ರಿಕ್ಸ್’ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಟರ್ಕಿಯ ಅಧ್ಯಕ್ಷ ರಿಸೆಪ್ ತಯ್ಯಿಬ್ ಎರ್ದೋಗನ್, ಇರಾನ್ಅ ಧ್ಯಕ್ಷ ಡಾ.ಮಸೂದ್ ಪೆಜೆಶ್ಕಿಯಾನ್ ಸೇರಿದಂತೆ ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ನಾಯಕರು ಭಾಗವಹಿಸಲಿದ್ದಾರೆ.
16ನೇ ಬ್ರಿಕ್ಸ್ ಶೃಂಗಸಭೆಯು ಅ.22ರಿಂದ 24ರವರೆಗೆ ರಷ್ಯಾದ ಕಜಾನ್ನಲ್ಲಿ ನಡೆಯಲಿದ್ದು, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸಭೆಯ ನೇತೃತ್ವವನ್ನು ವಹಿಸಲಿದ್ದಾರೆ.
Next Story