ಸಿಜೆಐ ನಿವಾಸಕ್ಕೆ ಮೋದಿ ಭೇಟಿ ಆಘಾತಕಾರಿ ಬೆಳವಣಿಗೆ: ಪ್ರಶಾಂತ್ ಭೂಷಣ್
PC : PTI
ಹೊಸದಿಲ್ಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ನಿವಾಸಕ್ಕೆ ಗಣೇಶ ಪೂಜೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿರುವುದನ್ನು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಪ್ರಶ್ನಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಶಾಂತ್ ಭೂಷಣ್, ಸಿಜೆಐ ಚಂದ್ರಚೂಡ್ ಅವರು ಮೋದಿಗೆ ತಮ್ಮ ನಿವಾಸಕ್ಕೆ ಭೇಟಿ ನೀಡಲು ಅವಕಾಶ ಮಾಡಿಕೊಟ್ಟಿರುವುದು ಆಘಾತಕಾರಿಯಾಗಿದೆ. ಇದು ನಾಗರಿಕರ ಮೂಲಭೂತ ಹಕ್ಕನ್ನು ರಕ್ಷಿಸುವ ಜವಾಬ್ದಾರಿಯನ್ನು ಹೊಂದಿರುವ ನ್ಯಾಯಾಂಗಕ್ಕೆ ಕೆಟ್ಟ ಸಂದೇಶವನ್ನು ಕಳುಹಿಸುತ್ತದೆ. ಸರ್ಕಾರವು ಸಂವಿಧಾನದ ಮಿತಿಯಲ್ಲಿ ಕಾರ್ಯ ನಿರ್ವಹಿಸಬೇಕು. ಅದಕ್ಕಾಗಿಯೇ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ಒಂದು ಕೈ ಅಗಲದಷ್ಟು ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದ್ದಾರೆ.
#WATCH | PM #NarendraModi visited CJI #DYChandrachud's residence in #NewDelhi for #Ganpati poojan@narendramodi pic.twitter.com/LmIYLQSjNy
— Hindustan Times (@htTweets) September 11, 2024
ಪ್ರಧಾನಿ ಮೋದಿ ಬುಧವಾರ ಸಿಜೆಐ ಡಿ ವೈ ಚಂದ್ರಚೂಡ್ ಅವರ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ವೀಡಿಯೊವೊಂದರಲ್ಲಿ, ಚಂದ್ರಚೂಡ್ ಮತ್ತು ಅವರ ಪತ್ನಿ ಕಲ್ಪನಾ ದಾಸ್ ಅವರು ತಮ್ಮ ಮನೆಗೆ ಪ್ರಧಾನಿ ಮೋದಿಯನ್ನು ಸ್ವಾಗತಿಸುತ್ತಿರುವುದು ಕಂಡುಬಂದಿದೆ.