ಇಂಡಿಯಾ ಮೈತ್ರಿಕೂಟದಿಂದ ಬಡವರ ಹಕ್ಕುಗಳಿಗಾಗಿ ಹೋರಾಟ : ರಾಹುಲ್ ಗಾಂಧಿ
ರಾಹುಲ್ ಗಾಂಧಿ | PC : PTI
ಹೊಸದಿಲ್ಲಿ : ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಶನಿವಾರ ಜನ್ಮದಿನದ ಶುಭಾಶಯಗಳನ್ನು ಕೋರಿದ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು,‘ಇಂಡಿಯಾ ಮೈತ್ರಿಕೂಟವು ದೇಶದಲ್ಲಿಯ ಬಡವರು,ಸೌಲಭ್ಯ ವಂಚಿತರು ಮತ್ತು ಬುಡಕಟ್ಟು ಜನರ ಹಕ್ಕುಗಳಿಗಾಗಿ ಹಾಗೂ ಅವರಿಗೆ ಎಸಗಲಾದ ಪ್ರತಿಯೊಂದೂ ಅನ್ಯಾಯದ ವಿರುದ್ಧ ಬಲವಾಗಿ ಹೋರಾಡಲಿದೆ ಮತ್ತು ನಾವು ಒಂದಾಗಿ ಈ ಹೋರಾಟವನ್ನು ಗೆಲ್ಲುತ್ತೇವೆ ’ ಎಂದು ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದಾರೆ.
ಜಾಖಂಡ್ ಮುಕ್ತಿಮೋರ್ಚಾದ ಅಧ್ಯಕ್ಷರೂ ಆಗಿರುವ ಸೊರೇನ್ ಶನಿವಾರ 49ನೇ ವರ್ಷಕ್ಕೆ ಕಾಲಿರಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೂ ಎಕ್ಸ್ ಪೋಸ್ಟ್ನಲ್ಲಿ ಸೊರೇನ್ ಅವರಿಗೆ ಶುಭಾಶಯಗಳನ್ನು ಕೋರಿದ್ದು,ದೇಶದಲ್ಲಿ ಸಾಮಾಜಿಕ ನ್ಯಾಯ,ಆರ್ಥಿಕ ಸಬಲೀಕರಣ ಮತ್ತು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಗಾಗಿ ಇಂಡಿಯಾ ಮೈತ್ರಿಕೂಟವು ಒಗ್ಗಟ್ಟಿನಿಂದ ಹೋರಾಡುತ್ತಿದೆ ಎಂದು ಹೇಳಿದ್ದಾರೆ.
ವಷಾಂತ್ಯದಲ್ಲಿ ಜಾರ್ಖಂಡ್ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಕಾಂಗ್ರೆಸ್ ಮತ್ತು ಜೆಎಂಎಂ ರಾಜ್ಯದಲ್ಲಿಯ ಸಮ್ಮಿಶ್ರ ಸರಕಾರದ ಪಾಲುದಾರರಾಗಿದ್ದು, ಬಿಜೆಪಿ ನೇತೃತ್ವದ ಪ್ರತಿಪಕ್ಷದ ಸವಾಲನ್ನು ಮೆಟ್ಟಿ ನಿಂತು ಮತ್ತೊಮ್ಮೆ ಸಮ್ಮಿಶ್ರ ಸರಕಾರ ರಚಿಸುವ ವಿಶ್ವಾಸವನ್ನು ಹೊಂದಿವೆ.