ರಾಜ್ಯಸಭಾ ಉಪಚುನಾವಣೆ | 8 ರಾಜ್ಯಗಳಿಂದ 9 ಬಿಜೆಪಿ ಅಭ್ಯರ್ಥಿಗಳ ಘೋಷಣೆ
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ : ಸೆ.3ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗಳಿಗಾಗಿ ಬಿಜೆಪಿ 8 ರಾಜ್ಯಗಳಿಂದ ತನ್ನ 9 ಅಭ್ಯರ್ಥಿಗಳನ್ನು ಘೋಷಿಸಿದೆ.
ಕೇಂದ್ರ ಸಚಿವರಾದ ರವನೀತ್ ಸಿಂಗ್ ಬಿಟ್ಟು ಅವರನ್ನು ರಾಜಸ್ಥಾನದಿಂದ ಮತ್ತು ಜಾರ್ಜ್ ಕುರಿಯನ್ ಅವರನ್ನು ಮಧ್ಯಪ್ರದೇಶದಿಂದ ಕಣಕ್ಕಿಳಿಸಲಾಗಿದೆ.
ಇತ್ತೀಚಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಮಾಜಿ ಬಿಜೆಡಿ ನಾಯಕಿ ಮಮತಾ ಮೊಹಾಂತ ಒಡಿಶಾದಿಂದ ಮತ್ತು ಮಾಜಿ ಕಾಂಗ್ರೆಸ್ ನಾಯಕಿ ಕಿರಣ್ ಚೌಧರಿ ಹರ್ಯಾಣದಿಂದ ಸ್ಪರ್ಧಿಸಲಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ಹಿರಿಯ ವಕೀಲ ಹಾಗೂ ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಬಿಹಾರದಿಂದ, ಧೈರ್ಯಶಾಲಿ ಪಾಟೀಲ್ ಮಹಾರಾಷ್ಟ್ರದಿಂದ, ರಜಿಬ್ ಭಟ್ಟಾಚಾರ್ಜಿ ತ್ರಿಪುರಾದಿಂದ, ರಂಜನ್ ದಾಸ್ ಮತ್ತು ಮಾಜಿ ಸಚಿವ ರಾಮೇಶ್ವರ್ ತೇಲಿ ಅವರು ಅಸ್ಸಾಮ್ ನಿಂದ ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ.
ಸೆ.3ರಂದು 12 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈ ಪೈಕಿ 10 ಸ್ಥಾನಗಳು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್,ಸರ್ಬಾನಂದ್ ಸೋನೊವಾಲ್ ಮತ್ತು ಜ್ಯೋತಿರಾದಿತ್ಯ ಸಿಂದಿಯಾ ಸೇರಿದಂತೆ ಹಾಲಿ ಸದಸ್ಯರು ಲೋಕಸಭೆಗೆ ಆಯ್ಕೆಯಾಗಿರುವುದರಿಂದ ತೆರವಾಗಿವೆ.