ಸೈಫ್ ಅಲಿ ಖಾನ್ ಗೆ ಇರಿತ ಪ್ರಕರಣದಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಭಾಗಿ: ಪೊಲೀಸರ ಶಂಕೆ

PC : PTI
ಮುಂಬೈ: ಸೈಫ್ ಅಲಿ ಖಾನ್ ಗೆ ಇರಿತ ಪ್ರಕರಣದಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಭಾಗಿಯಾಗಿರಬಹುದು ಎಂದು ಮುಂಬೈ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಈ ಸಂಬಂಧ ಈಗಾಗಲೇ 30 ವರ್ಷದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಲಾಗಿದೆ.
ಸೈಫ್ ಅಲಿ ಖಾನ್ ಮೇಲಿನ ದಾಳಿಯಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಭಾಗಿಯಾಗಿರುವ ಶಂಕೆಯ ನೆಲೆಯಲ್ಲಿ ಬಂಧಿತನಾಗಿರುವ ಆರೋಪಿಯನ್ನು ಪೊಲೀಸರು ತಮ್ಮ ವಶಕ್ಕೆ ಕೋರಿದ್ದಾರೆ ಎಂದು ಈ ಕುರಿತು ಮತ್ತಷ್ಟು ವಿವರಿಸದೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜನವರಿ 16ರಂದು ಬಾಂದ್ರಾದಲ್ಲಿನ ಸೈಫ್ ಅಲಿ ಖಾನ್ ನಿವಾಸದಲ್ಲಿ ಅವರ ಮೇಲೆ ನಡೆದ ದಾಳಿಯ ಸಂದರ್ಭದಲ್ಲಿ ಉಪಸ್ಥಿತರಿದ್ದ ಅವರ ಸಿಬ್ಬಂದಿಗಳ ರಕ್ತ ಮಾದರಿಗಳು ಹಾಗೂ ಬಟ್ಟೆಗಳನ್ನು ಪೊಲೀಸರು ಸಂಗ್ರಹಿಸಲಾಗಿದ್ದು, ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಗೆ ರವಾನಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.
ಜನವರಿ 19ರಂದು ನಟ ಸೈಫ್ ಅಲಿ ಖಾನ್ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಬಾಂಗ್ಲಾದೇಶದ ಪ್ರಜೆ ಶರೀಫುಲ್ ಇಸ್ಲಾಂ ಶೆಹಝಾದ್ ಮುಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್ ಅನ್ನು ನೆರೆಯ ಥಾಣೆ ಜಿಲ್ಲೆಯಿಂದ ಪೊಲೀಸರು ಬಂಧಿಸಿದ್ದರು.