ಚಾಕು ಇರಿತ ಪ್ರಕರಣ: ನಟ ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಬಿಡುಗಡೆ

ನಟ ಸೈಫ್ ಅಲಿ ಖಾನ್ (PTI)
ಮುಂಬೈ : ಚಾಕು ಇರಿತದಿಂದ ಗಾಯಗೊಂಡು ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜನವರಿ 16ರಂದು ಬಾಂದ್ರಾ ನಿವಾಸದಲ್ಲಿ ಸೈಫ್ ಅಲಿ ಖಾನ್ ಗೆ ಚೂರಿಯಿಂದ ಇರಿಯಲಾಗಿತ್ತು. ಬೆನ್ನುಮೂಳೆಗೆ ಆಳವಾದ ಗಾಯ ಸೇರಿದಂತೆ ಸೈಫ್ ಅಲಿ ಖಾನ್ ದೇಹದ ಮೇಲೆ 6 ಬಾರಿ ಇರಿಯಲಾಗಿತ್ತು. ಸೈಫ್ ಅಲಿ ಖಾನ್ ಗೆ ನರಶಸ್ತ್ರಚಿಕಿತ್ಸೆ ಮತ್ತು ಪ್ಲಾಸ್ಟಿಕ್ ಸರ್ಜರಿ ನಡೆಸಲಾಗಿದೆ.
ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಆರೋಪಿ ಶರೀಫುಲ್ ಇಸ್ಲಾಂ ಶಹಜಾದ್ ನನ್ನು ಬಂಧಿಸಿದ್ದು, ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಕಳ್ಳತನದ ಉದ್ದೇಶದಿಂದ ಈತ ಕೃತ್ಯವನ್ನು ನಡೆಸಿದ್ದಾನೆ ಎನ್ನುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Next Story