ಸನಾತನ ಧರ್ಮ ಹೇಳಿಕೆ: ಕ್ರಮಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಂಗೀಕರಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ ; ಉದಯನಿಧಿ ಸ್ಟಾಲಿನ್ ಗೆ ನಿರಾಳ

ಉದಯನಿಧಿ ಸ್ಟಾಲಿನ್ | PTI
ಹೊಸದಿಲ್ಲಿ: ಸೆಪ್ಟೆಂಬರ್ 2023ರಲ್ಲಿ ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಡಿಎಂಕೆ ನಾಯಕ ಹಾಗೂ ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕೆಂದು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆಗೆ ಅಂಗೀಕರಿಸಲು ಸೋಮವಾರ ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ, ಉದಯನಿಧಿ ಸ್ಟಾಲಿನ್ ನಿಟ್ಟುಸಿರು ಬಿಡುವಂತಾಗಿದೆ.
ನ್ಯಾ. ಬೇಲಾ ಎಂ. ತ್ರಿವೇದಿ ಹಾಗೂ ನ್ಯಾ. ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು, ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲು ನಿರಾಕರಿಸಿತು. ಅರ್ಜಿಯನ್ನು ಸಂವಿಧಾನದ 32ನೇ ವಿಧಿಯಡಿ ಹೇಗೆ ಸಮರ್ಥಿಸಿಕೊಳ್ಳುತ್ತೀರಿ ಎಂದು ನ್ಯಾಯಾಲಯವು ಅರ್ಜಿದಾರರನ್ನು ಪ್ರಶ್ನಿಸಿತು.F
Next Story