ಬಿಹಾರ | ಟೆಂಪೋ- ಟ್ರಕ್ ನಡುವೆ ಭೀಕರ ಅಪಘಾತ : 7 ಮಂದಿ ಮೃತ್ಯು

ಸಾಂದರ್ಭಿಕ ಚಿತ್ರ
ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ಟ್ರಕ್ ಮತ್ತು ಟೆಂಪೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರವಿವಾರ ರಾತ್ರಿ ಮಸೌರಿ ಪ್ರದೇಶದ ನೂರಾ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತ ಮಸೌರಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ವಿಜಯ್ ಕುಮಾರ್ ಮಾಹಿತಿ ನೀಡಿದ್ದು, ರವಿವಾರ ರಾತ್ರಿ 9.30ರ ಸುಮಾರಿಗೆ ಘಟನೆ ನಡೆದಿದೆ. ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಅಪಘಾತ ನಡೆದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
Next Story