ಸಿಸೋಡಿಯ ಜಾಮೀನು ಷರತ್ತು ಸಡಿಲಿಕೆ : ಸಿಬಿಐ, ಈಡಿಗೆ ಸುಪ್ರೀಂ ಕೋರ್ಟ್ ನೋಟಿಸ್
ಸುಪ್ರೀಂ ಕೋರ್ಟ್ | PTI
ಹೊಸದಿಲ್ಲಿ: ತನ್ನ ಜಾಮೀನು ಷರತ್ತುಗಳಿಗೆ ಮಾರ್ಪಾಡು ಮಾಡಬೇಕೆಂದು ಕೋರಿ ದಿಲ್ಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಶುಕ್ರವಾರ ಸಿಬಿಐ ಮತ್ತು ಅನುಷ್ಠಾನ ನಿರ್ದೇಶನಾಲಯ (ಈಡಿ)ಕ್ಕೆ ನೋಟಿಸ್ ಜಾರಿಗೊಳಿಸಿದೆ.
ವಾರಕ್ಕೆ ಎರಡು ಬಾರಿ ತನಿಖಾಧಿಕಾರಿ ಮುಂದೆ ಹಾಜರಾಗಬೇಕು ಎಂಬ ಷರತ್ತನ್ನು ಸಿಸೋಡಿಯರಿಗೆ ವಿಧಿಸಲಾಗಿದೆ.
ಸಿಸೋಡಿಯರಿಗೆ ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆಗಸ್ಟ್ 9ರಂದು ಜಾಮೀನು ನೀಡಿತ್ತು.
ಜಾಮೀನು ಸಿಕ್ಕ ಬಳಿಕ, ಸಿಸೋಡಿಯ ಈವರೆಗೆ 60 ಬಾರಿ ತನಿಖಾಧಿಕಾರಿಯ ಮುಂದೆ ಹಾಜರಾಗಿದ್ದಾರೆ ಎಂದು ಅವರ ಪರವಾಗಿ ನ್ಯಾಯಾಲಯದಲ್ಲಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಲಯಕ್ಕೆ ತಿಳಿಸಿದರು.
ಸಿಬಿಐ ಮತ್ತು ಅನುಷ್ಠಾನ ನಿರ್ದೇಶನಾಲಯಕ್ಕೆ ನೋಟಿಸ್ಗಳನ್ನು ನೀಡಿದ ಬಳಿಕ, ನ್ಯಾಯಮೂರ್ತಿಗಳಾದ ಭೂಷಣ್ ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠವು ವಿಚಾರಣೆಯನ್ನು ಎರಡು ವಾರಗಳವರೆಗೆ ಮುಂದೂಡಿತು.