ಸೀತಾರಾಂ ಯೆಚೂರಿ ಆರೋಗ್ಯ ಸ್ಥಿತಿ ಗಂಭೀರ: ಸಿಪಿಐ(ಎಂ)
ಸೀತಾರಾಮ್ ಯೆಚೂರಿ (PTI)
ಹೊಸದಿಲ್ಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ದಿಲ್ಲಿಯ ಏಮ್ಸ್ ನಲ್ಲಿ ವೆಂಟಿಲೇಟರ್ ಸಹಾಯದಿಂದಿದ್ದಾರೆ ಎಂದು ಸಿಪಿಐ(ಎಂ) ಪಕ್ಷವು ತಿಳಿಸಿದೆ.
72 ವರ್ಷದ ಸೀತಾರಾಮ್ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಪಿಐ(ಎಂ) ಪಕ್ಷವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ನುರಿತ ವೈದ್ಯರ ತಂಡವು ಯೆಚೂರಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದು, ಈಗ ಅವರ ಆರೋಗ್ಯ ಸ್ಥಿತಿಯು ಗಂಭೀರವಾಗಿದೆ ಎಂದು ಪಕ್ಷವು ಹೇಳಿಕೊಂಡಿದೆ.
ನ್ಯುಮೋನಿಯಾ ತರಹದ ಸೋಂಕಿನ ಚಿಕಿತ್ಸೆಗಾಗಿ ಯೆಚೂರಿ ಅವರನ್ನು ಆ.19 ರಂದು ಏಮ್ಸ್ ಗೆ ದಾಖಲಿಸಲಾಗಿತ್ತು.
Next Story